ದಿನಾಂಕ 07-08-2022 ರಂದು ಹಾಸನ ಜಿಲ್ಲಾ ಬ್ರಾಹ್ಮಣ ಸಭಾವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಸನ ನಗರದ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಡಾ.ವಾಗೀಶ್ ಭಟ್ ಮತ್ತು ತಂಡದವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು ಮತ್ತು ನೂತನ ಅಧ್ಯಕ್ಷರಾದ ಶ್ರೀ ಅಶೋಕ್ ಹಾರನಹಳ್ಳಿ ಅವರಿಗೆ ಅಭಿನಂದನ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಮೂರ್ತಿ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಹಾಸನ ಶಂಕರ ಮಠದ ಧರ್ಮಾಧಿಕಾರಿ ಶ್ರೀಕಂಠಯ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಾಸನ ಶಾಸಕ ಶ್ರೀ ಪ್ರೀತಂ ಜೆ ಗೌಡ, ಮಹಾಸಭಾದ ಉಪಾಧ್ಯಕ್ಷರಾದ ಶ್ರೀ. ಸುರೇಶ್, ಸಂಘಟನಾ ಕಾರ್ಯದರ್ಶಿ ಡಾ.ರಾಘವೇಂದ್ರ ಭಟ್, ಜಂಟಿ ಕಾರ್ಯದರ್ಶಿ ಶ್ರೀ. ಕಾರ್ತಿಕ್ ಬಾಪಟ್, ವಲಯ ಉಪಾಧ್ಯಕ್ಷರಾದ ಶ್ರೀ ಟಿ.ಎಚ್.ಚಂದ್ರಶೇಖರ್ ಮತ್ತು ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ. ಗೋಪಾಲ್ ಎನ್.ಎಸ್, ನಿಖಿಲ್ ಭಾರದ್ವಾಜ್ ಉಪಸ್ಥಿತರಿದ್ದರು