ಈ ದಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿ ರವರ ಮಾರ್ಗದರ್ಶನದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪವಿರುವ ಶ್ರೀರಾಮಚಂದ್ರಾಪುರ ಮಠದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಮಹೇಶ್ ಕಜೆ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಬಿಎಸ್ ರಾಘವೇಂದ್ರ ಭಟ್ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಹರಿಪ್ರಸಾದ್ ಗಿರಿ ಪ್ರಕಾಶ್ ತಂತ್ರಿ ಮತ್ತು ಕೆ ಮಂಜುನಾಥ ಶಾಸ್ತ್ರಿ ಪದಾಧಿಕಾರಿಗಳು ಎಲ್ಲರೂ ಸೇರಿ ಸದಸ್ಯತ್ವ ಅಭಿಯಾನದ ಬಗ್ಗೆ ಶ್ರೀಮಠದಲ್ಲಿ ಸಭೆಯನ್ನು ನಡೆಸಿ ನಂತರ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀಮದ್ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ದರ್ಶನವನ್ನು ಪಡೆದು ಶ್ರೀಗಳ ಅಮೃತಹಸ್ತದಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಇಂತಿ
ಬಿಎಸ್ ರಾಘವೇಂದ್ರ ಭಟ್
ರಾಜ್ಯ ಸಂಘಟನಾ ಕಾರ್ಯದರ್ಶಿಗಳು
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ) ಬೆಂಗಳೂರು.