ಇಂದು ಗುಲಬರ್ಗಾ ದಲ್ಲಿ ಗೋಮುಖ ರಾಯರ ಮಠ ದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಹಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀ ರಾಘವೇಂದ್ರ ಕುಲಕರ್ಣಿ ಕೋಗನೂರ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ರಂಗನಾಥ್ ದೇಸಾಯಿ, ಶ್ರೀ ಪ್ರಶಾಂತ್ ಕೊರಳ್ಳಿ ಹಾಗೂ ಶ್ರೀ ಮಂಜುನಾಥ್ ಕುಲಕರ್ಣಿ ಅವರಿಗೆ ಅಭಿನಂದಿಸಲಾಯಿತು. ಮಾಜಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀ ನರಹರಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.
ವಂದನೆಗಳೊಂದಿಗೆ,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ).