ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಎಂ.ಆರ್.ಶಿವಶಂಕರ್ ಅವರು ತುಮಕೂರು ಜಿಲ್ಲಾ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಜಿಲ್ಲಾ ಬ್ರಾಹ್ಮಣ ಸಂಘದ ಸಭೆಯನ್ನು ಸಂಘಟನೆ ಬಲಪಡಿಸುವ ಉದ್ದೇಶದಿಂದ ನಡೆಸಿದರು, ಜಿಲ್ಲೆಯ ಬ್ರಾಹ್ಮಣ ಸಂಘ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಬ್ರಾಹ್ಮಣ ಸಂಘಗಳ ಪ್ರಮುಖರು ಭಾಗವಹಿಸಿದ್ದ ಸಭೆಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಾಸಭಾಗೆ ಸದಸ್ಯರನ್ನು ಮಾಡಿದರೆ ಮುಂದಿನ ಅಧ್ಯಕ್ಷರ ಚುನಾವಣೆಯಲ್ಲಿ ಇಲ್ಲಿಯೆ ಮತದಾನ ಕೇಂದ್ರ ತೆರೆಯಲಾಗುವುದು ಎಂದು ಉಪಾಧ್ಯಕ್ಷ ರಾದ ಎಂ.ಆರ್. ಶಿವಶಂಕರ್ ತಿಳಿಸಿದರು, ಇಂದು ಸುಮಾರು 80 ಸದಸ್ಯರನ್ನು ಮಹಾಸಭಾಗೆ ನೂಂದಾಯಿಸಿದ್ದು ಆರು ತಿಂಗಳಲ್ಲಿ ಒಂದು ಸಾವಿರ ಸದಸ್ಯರನ್ನು ನೋಂದಣಿ ಮಾಡಲು ಸಭೆಯಲ್ಲಿ ಎಂ. ಆರ್. ಶಿವಶಂಕರ್ ಜಿಲ್ಲೆಯ ಪದಾಧಿಕಾರಿಗಳಿಗೆ ಮನವಿ ಮಾಡಿದರು, ಜಿಲ್ಲಾ ಅಧ್ಯಕ್ಷ ರಾದ ಚಂದ್ರಶೇಖರ್, ಮಹಾನಗರ ಪಾಲಿಕೆ ಸದಸ್ಯರಾದ ಸಿ.ಎನ್.ರಮೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಹಾಗೂ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದರು