ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನೇತೃತ್ವದ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ , ಶಾಸಕರಾದ ರವಿ ಸುಬ್ರಮಣ್ಯ , ಉದಯ್ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ , ಮಹಾಸಭಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಹಿರಿಯ ಪದಾಧಿಕಾರಿ ರಾಜೇಂದ್ರ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು. ಮಹಾ ಸಭಾ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಈ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕೆ ಮೀಸಲಾತಿ ಸೌಲಭ್ಯ ಕಲ್ಪಿಸುವಂತೆಯೂ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ವಿನಂತಿಸಿದರು.
ಸಿಎಂ ಭರವಸೆ : ನಿಯೋಗದ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ಮಹಾ ಸಭಾದ ಸಮುದಾಯ ಭವನದ ನಿರ್ಮಾಣಕ್ಕೆ ಅನುದಾನ ಬಿಡುಗಡೆಯ ಭರವಸೆ ನೀಡಿದರಲ್ಲದೇ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸುವುದಾಗಿಯೂ ಭರವಸೆ ನೀಡಿದರು.
ವಂದನೆಗಳೊಂದಿಗೆ,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ).